ಭಾಗ್ಯದ ಲಕ್ಷ್ಮೀ ಬಾರಮ್ಮಾ ನಮ್ಮಮ್ಮ ನೀ ಸೌ ಭಾಗ್ಯದ ಲಕ್ಷ್ಮೀ ಬಾರಮ್ಮಾ ॥ ಪ ॥ ಹೆಜ್ಜಯ ಮೇಲೆ ಹೆಜ್ಜೆಯನಿಕ್ಕುತ ಗೆಜ್ಜೆ ಕಾಲ್ಗಳ ಧ್ವನಿಯ ತೋರುತ ಸಜ್ಜನ ಸಾಧು ಪೂಜೆಯ ವೇಳೆಗೆ ಮಜ್ಜಿಗೆಯೊಳಗಿನ ಬೆಣ್ಣೆಯಂತೆ ॥ ೧ ॥ ಕನಕ ವೃಷ್ಟಿಯ ಕರೆಯುತ ಬಾರೆ ಮನ ಕಾಮನೆಯ ಸಿದ್ಧಿಯ ತೋರೇ ದಿನಕರ ಕೋಟಿ ತೇಜದಿ ಹೊಳೆವ ಜನಕರಾಯನ ಕುಮಾರಿ ಬೇಗ ॥ ೨ ಅತ್ತಿತ್ತಲಗದೆ ಭಕ್ತರ ಮನೆಯೊಳು ನಿತ್ಯ ಮಹೋತ್ಸವ ನಿತ್ಯ ಸುಮಂಗಳ ಸತ್ಯವ ತೋರುವ ಸಾಧು ಸಜ್ಜನರ ಚಿತ್ತದಿ ಹೊಳೆವಾ ಪುತ್ತಳಿ ಬೊಂಬೆ ॥ ೩॥ ಸಂಖ್ಯೆ ಇಲ್ಲದ ಭಾಗ್ಯವ ಕೊಟ್ಟು ಕಂಕಣ ಕೈಯ ತಿರುವುತ ಬಾರೆ ಕುಂಕುಮಾಂಕಿತೆ ಪಂಕಜ ಲೋಚನೆ ವೆಂಕಟರಮಣನ ಬಿಂಕದ ರಾಣೀ ॥ ೪ ॥ ಸಕ್ಕರೆ ತುಪ್ಪದ ಕಾಲುವೆ ಹರಿಸಿ ಶುಕ್ರವಾರದ ಪೂಜೆಯ ವೇಳೆಗೆ ಅಕ್ಕರೆಯುಳ್ಳ ಅಳಗಿರಿ ರಂಗನ ಚೊಕ್ಕ ಪುರಂದರ ವಿಠಲನ ರಾಣೀ ॥ ೫ ॥
Bhagyada Lakshmi Baaramma
Kannada
Suggest a correction
Help us care for this work. Include the passage or audio timestamp and your suggested change. A source reference is welcome.