Keshava Nama

Script : Kannada

ಈಶ ನಿನ್ನ ಚರಣ ಭಜನೆ | ಆಶೆಯಿಂದ ಮಾಡುವೆನು ದೋಶರಾಶಿ ನಾಶಮಾಡು ಶ್ರೀಶ ಕೇಶವ ||

ಶರಣು ಹೊಕ್ಕೆನಯ್ಯ ಎನ್ನ | ಮರಣ ಸಮಯದಲ್ಲಿ ನಿನ್ನ | ಚರಣ ಸ್ಮರಣೆ ಕರುಣಿಸಯ್ಯ ನಾರಾಯಣ ||೧||

ಶೋಧಿಸೆನ್ನ ಭವದ ಕಲುಶ | ಭೋಧಿಸಯ್ಯ ಜ್ಞಾನವೆನಗೆ|| ಬಾಧಿಸುವ ಯಮನ ಬಾಧೆ | ಬಿಡಿಸು ಮಾಧವ ||೨||

ಹಿಂದನೇಕ ಯೋನಿಗಳಲಿ | ಬಂದು ಬಂದು ನೊಂದೆನಯ್ಯ || ಇಂದು ಭವದ ಬಂಧ ಬಿಡಿಸೋ ತಂದೆ ಗೋವಿಂದ ||೩||

ಭ್ರಷ್ಟನೆನಿಸಬೇಡ ಕೃಷ್ಣ | ಇಷ್ಟು ಮಾತ್ರ ಬೇಡಿಕೊಂಬೆ || ಶಿಷ್ಟರೊಡನೆ ಇಟ್ಟು ಕಷ್ಟ | ಬಿಡಿಸು ವಿಷ್ಣುವೇ ||೪||

ಮದನನಯ್ಯ ನಿನ್ನ ಮಹಿಮೆ | ವದನದಲ್ಲಿ ನುಡಿಯುವಂತೆ || ಹೃದಯದಲ್ಲಿ ಹುದುಗಿಸಯ್ಯ ಮಧುಸೂದನ ||೫||

ಕವಿದುಕೊಂಡು ಇರುವ ಪಾಪ | ಸವೆದು ಪೋಗುವಂತೆ ಮಾಡಿ || ಜವನ ಬಾಧೆಯನ್ನು ಬಿಡಿಸೋ | ಶ್ರೀತ್ರಿವಿಕ್ರಮ ||೬||

ಕಾಮಜನಕ ನಿನ್ನ ನಾಮ | ಪ್ರೇಮದಿಂದ ಪಾಡುವಂಥ || ನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ ||೭||

ಮೊದಲು ನಿನ್ನ ಪಾದಪೂಜೆ | ಒದಗುವಂತೆ ಮಾಡೋ ಎನ್ನ || ಹೃದಯದೊಳಗೆ ಸದನ ಮಾಡು ಮುದದಿ ಶ್ರೀಧರ ||೮||

ಹುಸಿಯನಾಡಿ ಹೊಟ್ಟೆ ಹೊರೆವ | ವಿಷಯದಲ್ಲಿ ರಸಿಕನೆಂದು || ಹುಸಿಗೆ ಹಾಕದಿರೋ ಎನ್ನ ಹೃಷೀಕೇಶನೇ ||೯||

ಕಾಮಕ್ರೋಧ ಬಿಡಿಸಿ ನಿನ್ನ | ನಾಮ ಜಿಹ್ವೆಯೊಳಗೆ ನುಡಿಸು || ಶ್ರೀಮಹಾನುಭಾವನಾದ ದಾಮೋದರ ||೧೦||

ಬಿದ್ದು ಭವದನೇಕ ಜನುಮ | ಬದ್ದನಾಗಿ ಕಲುಷದಿಂದ || ಗೆದ್ದು ಪೋಪ ಬುಧ್ಧಿ ತೋರೊ ಪದ್ಮನಾಭನೆ ||೧೧||

ಪಂಕಜಾಕ್ಷ ನೀನೆ ಎನ್ನ | ಮಂಕುಬುದ್ಧಿಯನ್ನು ಬಿಡಿಸಿ | ಕಿಂಕರನ್ನ ಮಾಡಿಕೊಳ್ಳೋ ಸಂಕರ್ಷಣ ||೧೨||

ಏಸು ಜನ್ಮ ಬಂದರೇನು | ದಾಸನಲ್ಲವೇನು ನಾನು || ಘಾಸಿ ಮಾಡದಿರು ಇನ್ನು ವಾಸುದೇವನೇ ||೧೩||

ಬುದ್ಧಿ ಶೂನ್ಯನಾಗಿ ಎನ್ನ | ಬದ್ಧಕಾಯ ಕುಹಕ ಮನವ || ತಿದ್ದಿ ಹೃದಯ ಶುದ್ಧ ಮಾಡೋ ಪ್ರದ್ಯುಮ್ನನೇ ||೧೪||

ಜನನಿ ಜನಕ ನೀನೆಯೆಂದು | ನೆನೆವೆನಯ್ಯ ದೀನಬಂಧು || ಎನಗೆ ಮುಕ್ತಿ ಪಾಲಿಸಿನ್ನು ಅನಿರುದ್ಧನೇ ||೧೫||

ಹರುಶದಿಂದ ನಿನ್ನ ನಾಮ | ಸ್ಮರಿಸುವಂತೆ ಮಾಡು ಕ್ಷೇಮ || ಇರಿಸು ಚರಣದಲ್ಲಿ ಪ್ರೇಮ ಪುರುಷೋತ್ತಮ ||೧೬||

ಸಾಧುಸಂಗ ಕೊಟ್ಟು ನಿನ್ನ | ಪಾದಭಜನೆ ಇತ್ತು ಎನ್ನ || ಭೇದಮಾಡಿ ನೋಡದಿರೊ ಹೇ ಅಧೋಕ್ಷಜ ||೧೭||

ಚಾರುಚರಣ ತೋರಿ ಎನಗೆ | ಪಾರುಗಾಣಿಸಯ್ಯ ಕೊನೆಗೆ || ಭಾರ ಹಾಕಿರುವೆ ನಿನಗೆ ನಾರಸಿಂಹನೇ ||೧೮||

ಸಂಚಿತಾದಿ ಪಾಪಗಳು | ಕಿಂಚಿತಾದ ಪೀಡೆಗಳನು || ಮುಂಚಿತಾಗಿ ಕಳೆಯಬೇಕೋ ಸ್ವಾಮಿ ಅಚ್ಯುತ ||೧೯||

ಜ್ಞಾನ ಭಕುತಿ ಕೊಟ್ಟು ನಿನ್ನ | ಧ್ಯಾನದಲ್ಲಿ ಇಟ್ಟು ಸದಾ || ಹೀನ ಬುದ್ಧಿ ಬಿಡಿಸೊ ಮುನ್ನ ಶ್ರೀ ಜನಾರ್ಧನ ||೨೦||

ಜಪತಪಾನುಷ್ಠಾನವಿಲ್ಲ | ಕುಪಿತಗಾಮಿಯಾದ ಎನ್ನ || ಕೃಪೆಯ ಮಾಡಿ ಕ್ಷಮಿಸಬೇಕು ಹೇ ಉಪೇಂದ್ರನೇ ||೨೧||

ಮೊರೆಯ ಇಡುವೆನಯ್ಯ ನಿನಗೆ | ಶರಧಿಶಯನ ಶುಭಮತಿಯ|| ಇರಿಸೋ ಭಕ್ತರೊಳಗೆ ಪರಮಪುರುಷ ಶ್ರೀಹರೇ ||೨೨||

ಪುಟ್ಟಿಸಲೇಬೇಡ ಇನ್ನು | ಪುಟ್ಟಿಸಿದಕೆ ಪಾಲಿಸಿನ್ನು|| ಇಷ್ಟು ಮಾತ್ರ ಬೇಡಿಕೊಂಬೆ ಶ್ರೀ ಕೃಷ್ಣನೇ ||೨೩||

ಸತ್ಯವಾದ ನಾಮಗಲನು | ನಿತ್ಯದಲ್ಲಿ ಪಠಿಸುವರಿಗೆ || ಅರ್ಥಿಯಿಂದ ಸಲಹುತಿರುವ ಕರ್ತೃ ಕೇಶವ ||೨೪||

ಮರೆಯದಲೆ ಹರಿಯ ನಾಮ | ಬರೆದು ಓದಿ ಪೇಳ್ದವರಿಗೆ || ಕರೆದು ಮುಕ್ತಿ ಕೊಡುವ ನೆಲೆಯಾದಿಕೇಶವ ||೨೫||

Kannada

Suggest a correction

Help us care for this work. Include the passage or audio timestamp and your suggested change. A source reference is welcome.

Your message goes to the Matha’s editorial team. Your email is used only to reply to this report. Privacy policy

← Browse more stotrasRead & listen in the app ↗